ವಿಡಿಯೋ
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ವರೆಗೂ ಸುಮಾರು 105 ಮಂದಿ ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿದ್ದಾರೆ. ಮತ್ತಷ್ಟು ಹಿಂಸಾಚಾರವನ್ನು ತಡೆಯಲು ಪೊಲೀಸರು ಬಾಂಗ್ಲಾದೇಶದಾದ್ಯಂತ ಕಟ್ಟುನಿಟ್ಟಾದ ಕರ್ಫ್ಯೂ ಜಾರಿಗೊಳಿಸಿದ್ದಾರೆ ಮತ್ತು ಮಿಲಿಟರಿ ಪಡೆಗಳು ಶನಿವಾರ ರಾಜಧಾನಿಯ ಕೆಲವು ಭಾಗಗಳಲ್ಲಿ ಗಸ್ತು ತಿರುಗುತ್ತಿವೆ.
ಕೆಲವೆಡೆ ಇಂಟರ್ನೆಟ್ ಹಾಗೂ ಮೊಬೈಲ್ ಸೇವೆ ಕಡಿತಗೊಳಿಸಲಾಗಿದ್ದು ಪ್ರತಿಭಟನಕಾರರ ಮೇಲೆ ಪೊಲೀಸರು, ಭದ್ರತಾ ಪಡೆಗಳು ಗುಂಡಿನ ದಾಳಿ, ಅಶ್ರುವಾಯು ಪ್ರಯೋಗಿಸಿದ್ದಾರೆ. ಈಮಧ್ಯೆ, ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಸುಮಾರು 1,000 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್ಸಾಗಿದ್ದಾರೆ.
Advertisement