ವಿಡಿಯೋ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಮುಡಾ ನಿವೇಶನ ವಿಚಾರವಾಗಿ ಸಂಪೂರ್ಣ ದಾಖಲೆಗಳನ್ನು ಮುಂದಿಟ್ಟು ಉತ್ತರಿಸಿದರು.