ವಿಡಿಯೋ
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತಿದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ.
ಮುಂಡಕ್ಕೈ, ಚೂರ್ಮಾಲ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಡಕ್ಕೈ ಗ್ರಾಮದಲ್ಲಿ ಕೆಸರಿನಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಗಂಟೆಗಟ್ಟಲೆ ಸಹಾಯಕ್ಕಾಗಿ ಕೂಗುತ್ತಿದ್ದ ದೃಶ್ಯ.
ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
Advertisement