ವಿಡಿಯೋ
ಪ್ರಜ್ವಲ್ ವಿರುದ್ಧ SIT ಲುಕ್ಔಟ್ ನೋಟಿಸ್; ಪ್ರಜ್ವಲ್ ರೇವಣ್ಣ Mass Rapist ಎಂದ ರಾಹುಲ್ ಗಾಂಧಿ
ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಯಾಗಿರುವ ಮತ್ತು ದೇಶ ಬಿಟ್ಟು ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಇಂದು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ HD ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ.
