ವಿಡಿಯೋ
ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಹತ್ಯೆ ಬೆದರಿಕೆ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಕೂಡ ಹೊಸ ಬೆದರಿಕೆ ಹಾಕಿದ್ದಾನೆ.
ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ.
ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ತಿಳಿಸಲಾಗಿದೆ.
ಬೆದರಿಕೆ ಹಾಕಿರುವ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಡಿಯೋ ವೀಕ್ಷಿಸಿ...
Advertisement