ವಿಡಿಯೋ
ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡು ಶಿಶು ತೀವ್ರ ನಿಗಾ ಘಟಕ (ಎನ್‌ಐಸಿಯು)ದ ಸುತ್ತಲೂ ಆವರಿಸಿದೆ. ವೈದ್ಯರು ಮತ್ತು ಇತರೆ ಸಿಬ್ಬಂದಿ ವಾರ್ಡ್‌ನ ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಹೊರಕ್ಕೆ ಕಳಿಸಿದ್ದಾರೆ.
10 ನವಜಾತ ಶಿಶುಗಳು ಸುಟ್ಟು ಕರಕಲಾಗಿದ್ದು, 16 ಮಕ್ಕಳಿಗೆ ಗಾಯಗಳಾಗಿವೆ. ವಾರ್ಡ್ ನಲ್ಲಿ 54 ಮಕ್ಕಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವು. ವಿಡಿಯೋ ಇಲ್ಲಿದೆ ನೋಡಿ.
Advertisement