ವಿಡಿಯೋ
ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಸಂಬಂಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು.
ಈ ಬಗ್ಗೆ ತನಿಖೆ ನಡೆಸಲು ಸಿಬಿಐನ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ತಂಡ ರಚಿಸಿ ಶುಕ್ರವಾರ ಆದೇಶಿಸಿದೆ.
ವಿಶೇಷ ತನಿಖಾ ತಂಡದಲ್ಲಿ (ಎಸ್‌ಐಟಿ)ಆಂಧ್ರಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಒಬ್ಬ ಎಫ್‌ಎಸ್‌ಎಸ್‌ಎಐನ ಹಿರಿಯ ಅಧಿಕಾರಿ ಇರಲಿದ್ದಾರೆ. ಎಸ್‌ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ.
ದೇವರಲ್ಲಿ ನಂಬಿಕೆ ಹೊಂದಿರುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಹೇಳಿತು.
Advertisement