ವಿಡಿಯೋ
ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಸಿಎಂ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಗೆ ಭಯ ಶುರುವಾಗಿದೆ. ಅವರಿಗೆ ನನ್ನ ಕಂಡರೆ ಭಯ... ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆವ್ವ ಆಗಿದ್ದರೆ ಭಯ ಪಡಬೇಕು. ದೆವ್ವ ಅಲ್ಲ ಅಲ್ವಾ? ಹಾಗಿದ್ದರೆ ನಾನು ಯಾಕೆ ಭಯಪಡಲಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ದೇವೇಗೌಡರ ನೆರಳಲ್ಲಿ ಬಂದ ನಾನು ನಾಡಿನ ಜನರಿಗೆ ಮಾತ್ರ ಹೆದರುತ್ತೇನೆ ಎಂದರು.
Advertisement