ವಿಡಿಯೋ
ದಸರಾ ಮುಗಿದು ದುರ್ಗೆಯ ವಿಗ್ರಹದ ವಿಸರ್ಜನೆ ಸಂದರ್ಭದಲ್ಲಿ ಉಂಟಾದ ಕೋಮು ಗಲಭೆ ವೇಳೆ 22 ವರ್ಷದ ಯುವಕ ಮೃತ್ಯುಪಟ್ಟ ನಂತರ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ.
ಉದ್ವಿಗ್ನತೆ ಉಲ್ಬಣಗೊಂಡಿದ್ದರಿಂದ ಅಂಗಡಿಗಳಿಗೆ ಬೆಂಕಿ ಹಚ್ಚಲಾಯಿತು. ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮನ್ಸೂರ್ ಗ್ರಾಮದ ಮಹರಾಜ್‌ಗಂಜ್ ಪ್ರದೇಶದಲ್ಲಿ ಪೊಲೀಸರು ಸುಮಾರು 30 ಜನರನ್ನು ಬಂಧಿಸಿದ್ದಾರೆ.
ಕಲ್ಲು ತೂರಾಟ ಮತ್ತು ಗುಂಡಿನ ದಾಳಿಯಲ್ಲಿ ಸುಮಾರು 6 ಮಂದಿ ಗಾಯಗೊಂಡಿದ್ದಾರೆ. ಹಲವಾರು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದವು. ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಪೊಲೀಸ್ ಪಡೆಗಳು ಪ್ರದೇಶದಲ್ಲಿ ಪಥಸಂಚಲನ ನಡೆಸಿದವು.
Advertisement