ವಿಡಿಯೋ
ಉತ್ತರ ಪ್ರದೇಶ ಪೊಲೀಸರು ಗುರುವಾರ ನಡೆಸಿದ ಎನ್ ಕೌಂಟರ್ ನಲ್ಲಿ ಬಹ್ರೈಚ್ ಹಿಂಸಾಚಾರ ಹಿಂಸಾಚಾರ ಪ್ರಕರಣದ ಐವರು ಶಂಕಿತರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ದಾಟಿ ನೇಪಾಳಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಇಬ್ಬರು ಪೊಲೀಸ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.
ಕೊಲೆಗೆ ಬಳಸಲಾದ ಆಯುಧವನ್ನು ವಶಕ್ಕೆ ಪಡೆಯಲು ನಾನ್ಪಾರಾ ಪ್ರದೇಶಕ್ಕೆ ಪೊಲೀಸರು ತೆರಳಿದಾಗ ಎನ್‌ಕೌಂಟರ್ ಸಂಭವಿಸಿದೆ ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ದೃಢಪಡಿಸಿದ್ದಾರೆ.
ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳಾದ ಎಂಡಿ ಸರ್ಫರಾಜ್ ಮತ್ತು ಎಂಡಿ ತಾಲಿಬ್ ಲೋಡೆಡ್ ಗನ್ ನಿಂದ ಗುಂಡು ಹಾರಿಸಿದ್ದಾರೆ.
ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಆರೋಪಿಗಳಿಬ್ಬರು ಗಾಯಗೊಂಡಿದ್ದಾರೆ. ಅವರು ಜೀವಂತವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement