ವಿಡಿಯೋ
ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ರಾಯಭಾರ ಅಧಿಕಾರಿಗಳು, ಗುಪ್ತಚರ ಅಧಿಕಾರಿಗಳ ಕೈವಾಡವಿದೆ. ಈ ಸಂಬಂಧ ಭಾರತ ಸರ್ಕಾರಕ್ಕೆ ಎಲ್ಲ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದ ಟ್ರುಡೋ ಈಗ ತಮ್ಮ ವರಸೆ ಬದಲಿಸಿದ್ದಾರೆ.
ಕೆನಡಾದ ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಈ ಬಗ್ಗೆ ಜಸ್ಟಿನ್ ಟ್ರುಡೋ ಮಾತನಾಡಿದ್ದಾರೆ.
'ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಅಧಿಕಾರಿಗಳ ಕೈವಾಡದ ಕುರಿತ ತಮ್ಮ ಹೇಳಿಕೆಗಳು ನಿರ್ಣಾಯಕ ಸಾಕ್ಷ್ಯಾಧಾರಗಳಿಗಿಂತ ಗುಪ್ತಚರವನ್ನು ಆಧರಿಸಿ ಹೇಳಿದ್ದಾಗಿತ್ತು ಎಂದು ಬಹಿರಂಗಪಡಿಸಿದ್ದಾರೆ.
Advertisement