ವಿಡಿಯೋ
ಕನ್ನಡ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಆಟೋ ಚಾಲಕರು ಮತ್ತು ಕನ್ನಡೇತರರ ನಡುವೆ ನಡೆದ ಘರ್ಷಣೆಯಿಂದ ಅಸಮಾಧಾನಗೊಂಡಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರು ಸ್ಥಳೀಯ ಭಾಷೆಯಲ್ಲಿ ಮೂಲಭೂತ ಸಂವಹನಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ.
ಲರ್ನ್ ಕನ್ನಡ ವಿತ್ ಆಟೋ ಕನ್ನಡಿಗ ಎಂಬ ವಿಶಿಷ್ಟ ಕಾನ್ಸೆಪ್ಟ್ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ. 'ಆಟೋ ಕನ್ನಡಿಗ' ಪ್ರೊಫೈಲ್ ಮೂಲಕ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜನಪ್ರಿಯವಾಗಿರುವ ಅಜ್ಜು ಸುಲ್ತಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ತಮ್ಮ ಪ್ರಯತ್ನದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.
Advertisement