ವಿಡಿಯೋ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸುಮಾರು 21 ಹಗರಣಗಳ ತನಿಖೆ ಚುರುಕುಗೊಳಿಸಲು ಮತ್ತು ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಇದರಲ್ಲಿ ಯಾವುದೇ ಸೇಡಿನ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲರೂ ಹೇಳುತ್ತಿರುವುದು ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬುಧವಾರ ಉತ್ತರಿಸಿದರು.
Advertisement