ವಿಡಿಯೋ
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ.
Advertisement