ವಿಡಿಯೋ
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ದೇವಲಾಪುರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಯಲ್ಲಿದ್ದು, ಕ್ಲಾಸ್ ರೂಮ್ ಗಳ ಸೀಲಿಂಗ್ ಕುಸಿದು ಬೀಳುತ್ತಿವೆ. ಇದರಿಂದ ಆತಂಕದ ಸ್ಥಿತಿ ಎದುರಾಗಿದ್ದು, ವಿದ್ಯಾರ್ಥಿಗಳು ಮೈದಾನದಲ್ಲಿ ಕುಳಿತು ಪಾಠ ಕೇಳುವಂತಾಗಿದೆ.
ಹಾನಿಗೊಳಗಾಗಿರುವ ಶಾಲೆಯ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ಸರ್ಕಾರ ಕೂಡಲೆ ಗಮನಹರಿಸುವಂತೆ ಆಗ್ರಹಿಸಿದ್ದಾರೆ.
Advertisement