ದೆಹಲಿ: ಫ್ಲೈಓವರ್ ರೈಲಿಂಗ್‌ಗೆ ಕಾರು ಡಿಕ್ಕಿ; ಐವರಿಗೆ ಗಾಯ

ನವದೆಹಲಿಯ ಗೀತಾ ಕಾಲೋನಿ ಮೇಲ್ಸೇತುವೆಯಲ್ಲಿ ಸೆಪ್ಟೆಂಬರ್ 19 ರಂದು ಕಾರೊಂದು ರೈಲಿಂಗ್‌ಗೆ ಡಿಕ್ಕಿ ಹೊಡೆದು ದೆಹಲಿ ವಿಶ್ವವಿದ್ಯಾಲಯದ 4 ವಿದ್ಯಾರ್ಥಿಗಳು ಸೇರಿದಂತೆ 5 ಜನರು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳು ಹುಟ್ಟುಹಬ್ಬವನ್ನು ಆಚರಿಸಿಕೊಂಡು ಗುರುಗ್ರಾಮದಿಂದ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸೈಡ್ ರೈಲಿಂಗ್‌ಗೆ ಡಿಕ್ಕಿ ಹೊಡೆದು ತೀವ್ರ ಹಾನಿಯಾಗಿದೆ.

ಚಾಲಕ ತನ್ನ ಮೊಬೈಲ್ ಫೋನ್‌ನಲ್ಲಿ ಹಾಡು ಬದಲಾಯಿಸಲು ಯತ್ನಿಸಿದ್ದು, ಆ ಸಂದರ್ಭದಲ್ಲಿ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com