ವಿಡಿಯೋ
ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) 'ಲಡ್ಡು ಪ್ರಸಾದ'ದಲ್ಲಿ ದನದ ಕೊಬ್ಬು ಬಳಕೆ ಸುದ್ದಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಸುದ್ದಿ ಬಂದ ನಂತರ ದೊಡ್ಡ ವಿವಾದ ಹುಟ್ಟಿಕೊಂಡಿದೆ.
ಈ ಬಗ್ಗೆ ತೆಲುಗು ಚಿತ್ರರಂಗದ ಸ್ಟಾರ್ ನಟ ವಿಷ್ಣು ಮಂಚು ಮತ್ತು ಪ್ಯಾನ್ ಇಂಡಿಯಾ ನಟ ಪ್ರಕಾಶ್ ರಾಜ್ ನಡುವೆ ಮಾತಿನ ಸಮರ ಶುರುವಾಗಿದೆ. ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಸೂಪರ್‌ಸ್ಟಾರ್ ಪವನ್ ಕಲ್ಯಾಣ್ ಅವರು ತಿರುಪತಿ ಲಡ್ಡು ತನಿಖೆಗೆ ಆದೇಶಿಸಿದ್ದಾರೆ.
Advertisement