ವಿಡಿಯೋ
ಹರ್ಯಾಣ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಕರ್ನಾಟಕದ ಮುಡಾ ಹಗರಣ ಸದ್ದು ಮಾಡುತ್ತಿದೆ.
ಸೋನಿಪತ್ ನಲ್ಲಿ ಇಂದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಡಾ ಹಗರಣವನ್ನು ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಡಾ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕೆಂದು ಹೈಕೋರ್ಟ್ ಆದೇಶ ನೀಡಿದೆ. ಸಿದ್ದರಾಮಯ್ಯ ವಿರುದ್ದ ತನಿಖೆ ಆಗಲೇಬೇಕು ಎಂದು ಮೋದಿ ಹೇಳಿದ್ದಾರೆ.
ವಾಲ್ಮೀಕಿ ನಿಗಮ ಹಗರಣವನ್ನು ಪ್ರಸ್ತಾಪಿಸಿದ ಮೋದಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರ ಹಣವನ್ನೂ ನುಂಗಿಹಾಕಿದೆ ಎಂದು ಲೇವಡಿ ಮಾಡಿದರು.
Advertisement