ವಿಡಿಯೋ
ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನನ ಮೃತದೇಹ 72 ದಿನಗಳ ಬಳಿಕ ಪತ್ತೆಯಾಗಿದೆ.
ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು.
ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.
ಗಂಗಾವಳಿ ನದಿಯಿಂದ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ನಂತರ ಲಾರಿಯಲ್ಲೇ ಅರ್ಜುನ್ ಮೃತದೇಹ ಪತ್ತೆಯಾಗಿದೆ.
Advertisement