ಕುತ್ಲೂರು ಗ್ರಾಮಕ್ಕೆ 'ಅತ್ಯುತ್ತಮ ಸಾಹಸ ಪ್ರವಾಸಿ ತಾಣ' ಪ್ರಶಸ್ತಿ!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ಇದೀಗ ರಾಷ್ಟ್ರದ ಗಮನ ಸೆಳೆದಿದೆ.

ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರತೀ ವರ್ಷ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.

ಒಂದು ಕಾಲದ ನಕ್ಸಲ್‌ ಪೀಡಿತ ಗ್ರಾಮವಾಗಿ ಗುರುತಿಸಿಕೊಂಡಿದ್ದ ಕುತ್ಲೂರು ಇದೀಗ ಪ್ರವಾಸೋದ್ಯಮ ಸಚಿವಾಲಯ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com