ವಿಡಿಯೋ
ಜಾತಿ ಸಂಖ್ಯೆ ಕಡಿಮೆಯಾಯಿತು ಎಂದು ಮಂಗ್ಯಾಗಳ ತರ ಕಿತ್ತಾಡಬೇಡಿ, ಹಿಂದೂಗಳಾಗಿ ಈ ಜಾತಿಗಣತಿ ನೋಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿವಿಮಾತು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಸಂಖ್ಯೆ ಹೊರ ಹಾಕಿ ಸಿಎಂ ಸಿದ್ದರಾಮಯ್ಯ ತನ್ನ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನು ಕುರಿ ಮಾಡಿದ್ದಾರೆ.
ವಾಸ್ತವ ವಿಚಾರಗಳನ್ನು ಮರೆ ಮಾಚಲು ಸಿದ್ದರಾಮಯ್ಯ ಜಾತಿ ಜನಗಣತಿಯನ್ನು ಮುನ್ನೆಲೆಗೆ ಬಿಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಜಾತಿಗಳನ್ನು ಒಡೆಯುತ್ತಿಲ್ಲ. ಒಟ್ಟಾರೆಯಾಗಿ ಅವರು ಹಿಂದೂ ಧರ್ಮವನ್ನು ಒಡೆಯುತ್ತಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement