ವಿಡಿಯೋ
'ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ.
ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ.
ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ' ಎಂದು ಪ್ರಧಾನಿ ಮೋದಿ ಉಗ್ರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಿಹಾರದಲ್ಲಿ ಇಂದು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement