Watch | ಪಹಲ್ಗಾಮ್ ದಾಳಿ: ಮೂವರು ಶಂಕಿತ ಭಯೋತ್ಪಾದಕರ ಮನೆಗಳು ಧ್ವಂಸ

ಕಾಶ್ಮೀರ ಕಣಿವೆಯಲ್ಲಿ ಮೂವರು ಶಂಕಿತ ಭಯೋತ್ಪಾದಕರ ಮನೆಗಳನ್ನು ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ.

26 ಜನರನ್ನು ಬಲಿತೆಗೆದುಕೊಂಡ ಭೀಕರ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ, ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಶುಕ್ರವಾರ ರಾತ್ರಿ ದಕ್ಷಿಣ ಕಾಶ್ಮೀರದ ಪುಲ್ವಾಮಾ, ಶೋಪಿಯಾನ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಶಂಕಿತ ಭಯೋತ್ಪಾದಕರ ಮನೆಗಳನ್ನು ನೆಲಸಮ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿಯ ಪ್ರಮುಖ ಶಂಕಿತನ ಮನೆ ಸೇರಿದಂತೆ ಇಬ್ಬರು ಲಷ್ಕರ್-ಎ-ತೈಬಾ ಭಯೋತ್ಪಾದಕರ ಮನೆಗಳನ್ನು ಗುರುವಾರ ಮತ್ತು ಶುಕ್ರವಾರ ಮಧ್ಯರಾತ್ರಿಯಲ್ಲಿ ಸ್ಫೋಟಕಗಳನ್ನು ಇಟ್ಟು ನಾಶಪಡಿಸಲಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com