Watch | 'ಭಯೋತ್ಪಾದನೆ ಉತ್ತೇಜಿಸುವ ರಕ್ಕಸ ರಾಷ್ಟ್ರ': ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಮತ್ತಷ್ಟು ಹಳಸಿದ್ದು, ಈ ನಡುವಲ್ಲೇ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದೆ.

ವಿಶ್ವಸಂಸ್ಥೆಯ 'ವಿಕ್ಟಿಮ್ಸ್ ಆಫ್ ಟೆರರಿಸಂ ಅಸೋಸಿಯೇಷನ್ ನೆಟ್‌ವರ್ಕ್' ಕಾರ್ಯಕ್ರಮದಲ್ಲಿ ಭಾರತದ ಕಾಯಂ ಉಪ ಪ್ರತಿನಿಧಿ, ರಾಯಭಾರಿ ಯೋಜನಾ ಪಟೇಲ್ ಮಾತನಾಡಿದ್ದಾರೆ.

ಕಳೆದ ಹಲವು ವರ್ಷಗಳಿಂದ ಭಯೋತ್ಪಾದಕರಿಗೆ ತರಬೇತಿ ಹಾಗೂ ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಇದರಿಂದ ಪಾಕಿಸ್ತಾನದ ನೈಜ ಬಣ್ಣ ಬಯಲಾಗಿದೆ.

ಈ ತಪ್ಪೊಪ್ಪಿಗೆ ಆಶ್ಚರ್ಯವೇನಿಲ್ಲ, ಪಾಕಿಸ್ತಾನ ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿರುವ ‘ರಾಕ್ಷಸ ರಾಷ್ಟ್ರ’ ಎಂಬುದನ್ನು ಇದು ಬಹಿರಂಗಪಡಿಸಿದೆ ಎಂದು ಗುಡುಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com