ವಿಡಿಯೋ
ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ PM, CM, ಕೇಂದ್ರ ಸಚಿವರು, ರಾಜ್ಯ ಸಚಿವರು 30 ದಿನಗಳ ಕಾಲ ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು.
ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದರು. ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧಕ್ಕೆ ಕಾರಣವಾಯಿತು.
ಮಸೂದೆಯನ್ನು ಮಂಡಿಸಿದ ತಕ್ಷಣ, ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ಪ್ರಾರಂಭಿಸಿದರು.
ಸದನದ ಬಾವಿಗೆ ದೌಡಾಯಿಸಿ ಘೋಷಣೆಗಳನ್ನು ಕೂಗಿದರು, ಅವರಲ್ಲಿ ಕೆಲವರು ಮಸೂದೆಗಳ ಪ್ರತಿಗಳನ್ನು ಹರಿದು ಎಸೆದರು. ವಿಡಿಯೋ ಇಲ್ಲಿದೆ ನೋಡಿ.
Advertisement