ವಿಡಿಯೋ
ರಾಷ್ಟ್ರೀಯ ಸ್ವಯಂ ಸೇವಕ (ಆರ್ಎಸ್ಎಸ್) ಸಂಘದ ಗೀತೆ ನಮಸ್ತೇ ಸದಾ ವತ್ಸಲೇ ಸಾಲುಗಳನ್ನು ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು.
ಅದು ಸಾಕಷ್ಟು ಸದ್ದು ಮಾಡಿ ಡಿ ಕೆ ಶಿವಕುಮಾರ್ ಅವರ ಮಾತುಗಳಿಗೆ ಸ್ವತಃ ಕಾಂಗ್ರೆಸ್ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದರು.
ಬಿಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
ಅದಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿದ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement