ವಿಡಿಯೋ
ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಾವೇರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಸಭೆ ನಡೆಸಿ ಗೊಂದಲವನ್ನ ತಿಳಿಗೊಳಿಸುವ ಪ್ರಯತ್ನ ಮಾಡಿದ್ದರು.
ಈ ಬೆನ್ನಲ್ಲೆ ಮತ್ತೊಂದು ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆಯಾಗಿದೆ. ಈ ಬಾರಿ ಡಿಕೆ ಶಿವಕುಮಾರ್ ತಮ್ಮ ಮನೆಯಲ್ಲಿ ಬ್ರೇಕ್ ಫಾಸ್ಟ್ ಆಯೋಜಿಸಿದ್ದು ಸಿಎಂ ಭಾಗಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಉಪಹಾರಕ್ಕಾಗಿ ಮನೆಗೆ ಆಹ್ವಾನಿಸಿರುವುದರ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಅದು ನನಗೂ ಸಿಎಂ ಗೂ ಸಂಬಂಧಪಟ್ಟ ವಿಚಾರ, ನಾವಿಬ್ಬರೂ ಬ್ರದರ್ಸ್ ತರಹ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement