ವಿಡಿಯೋ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುನ್ ಅವರು ಗುರುವಾರ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ.
ಅವರ ಜೊತೆಗೆ ಸಭೆ ನಡೆಸಲು ಅವಕಾಶ ನೀಡದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸತ್ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾನ್ಯವಾಗಿ, ಭಾರತಕ್ಕೆ ಯಾರೇ ಭೇಟಿ ನೀಡಿದರೂ ಅವರ ಜೊತೆ ಪ್ರತಿಪಕ್ಷದ ನಾಯಕರು ಸಭೆ ನಡೆಸುವುದು ಶಿಷ್ಟಾಚಾರ.
ಇದು ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರದಲ್ಲಿ ನಡೆಯುತ್ತಿತ್ತು. ಆದರೆ, ಈಗ ಈ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ ಎಂದು ದೂರಿದರು. ವಿಡಿಯೋ ಇಲ್ಲಿದೆ ನೋಡಿ.
Advertisement