ವಿಡಿಯೋ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದೂರನ್ನು ಪರಿಗಣಿಸಲು ದೆಹಲಿ ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ.
ಗಾಂಧಿ ಕುಟುಂಬಕ್ಕೆ ಕಿರುಕುಳ ಮಾಡುವುದು ಮತ್ತು ವಿರೋಧ ಪಕ್ಷಗಳನ್ನು ಗುರಿಯಾಗಿಸುವುದು ಈ ಪ್ರಕರಣದ ಉದ್ದೇಶವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಟೀಕಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜವಾಹರಲಾಲ್ ನೆಹರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ದೇಶದ ಹೆಮ್ಮೆ...
ನಾನು ಒಂದೇ ಒಂದು ಪ್ರಶ್ನೆಯನ್ನು ಕೇಳುತ್ತೇನೆ: ಅವರು ಇನ್ನೂ ನನಗೆ ಎಫ್‌ಐಆರ್ ಪ್ರತಿಯನ್ನು ಏಕೆ ನೀಡಿಲ್ಲ...
ಜಾರಿ ನಿರ್ದೇಶನಾಲಯದ ಇಮೇಜ್ ಇಂದು ಹಾಳಾಗಿದೆ... ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement