ವಿಡಿಯೋ
ಅಸ್ತಿತ್ವದಲ್ಲಿರುವ 20 ವರ್ಷಗಳಷ್ಟು ಹಳೆಯದಾದ ನರೇಗಾ ಯೋಜನೆ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬದಲಿಗೆ ಜಿ ರಾಮ್ ಜಿ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025, ಪ್ರತಿ ವರ್ಷ 125 ದಿನಗಳವರೆಗೆ ಗ್ರಾಮೀಣ ಉದ್ಯೋಗಗಳನ್ನು ಖಾತರಿಪಡಿಸುತ್ತದೆ.
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು ಮಸೂದೆ ಮೇಲಿನ ಚರ್ಚೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಉತ್ತರಿಸಿದ ನಂತರ ಜಿ ರಾಮ್ ಜಿ ಮಸೂದೆಯನ್ನು ಅಂಗೀಕರಿಸಲಾಯಿತು.
ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಪ್ರತಿಪಕ್ಷ ಸದಸ್ಯರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement