ವಿಡಿಯೋ
ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವರ್ಸಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರದ ಪ್ರಕರಣ ಮುಂದುವರೆದಿದ್ದು ದೂರು, ಪ್ರತಿದೂರುಗಳು ದಾಖಲಾಗುತ್ತಿವೆ. ಇದೀಗ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್ ಮೂಲಕ 13 ಪುಟಗಳ ದೂರನ್ನು ಸಿಟಿ ರವಿ ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಆರೋಪಿಸಿದ್ದಾರೆ.