ವಿಡಿಯೋ
ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿವೆ.
ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಈ ವೇಳೆ ಬ್ಯಾಂಕ್, ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್‌ಗಳ ಪ್ರತಿನಿಧಿಗಳ ಮೇಲೆ ಪ್ರಶ್ನೆಗಳ ಸುರಿಮಳೆಗೈದ ಮುಖ್ಯಮಂತ್ರಿಗಳು, ನಿಯಮ ಮೀರಿ ಸಾಲ ವಸೂಲಿ ಮಾಡಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಸಭೆಯ ನಂತರ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement