ವಿಡಿಯೋ
ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಕುಟುಂಬಸ್ಥರ ಜೊತೆ ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿ ಈಡುಗಾಯಿ ಒಡೆದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಡಿ ಕೆ ಶಿವಕುಮಾರ್ ಮಾತನಾಡಿದರು. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ದುಃಖ, ಕಷ್ಟಗಳನ್ನು ಸಹಿಸುವ ಶಕ್ತಿಯನ್ನು ನೀಡಲಿ.
ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅನ್ನೋದು ನನ್ನ ನಂಬಿಕೆ, ನನಗೆ ಏನೇನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ.
ಇಲ್ಲಿ ರಾಜಕೀಯ ಬಗ್ಗೆ ಮಾತನಾಡಲು ನಾನು ಬಂದಿಲ್ಲ, ಯಾವ ಚರ್ಚೆಯೂ ಬೇಡ, ರಾಜ್ಯಕ್ಕೆ ಒಳ್ಳೆದಾಗಲಿ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement