ವಿಡಿಯೋ
'ಆಪರೇಷನ್ ಸಿಂಧೂರ್' ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ಹೇಗೆಲ್ಲಾ ನೆರವು ನೀಡಿದವು ಎಂಬುದನ್ನು ಸೇನೆಯ ಉಪ ಮುಖ್ಯಸ್ಥರಾಗಿರುವ ಲೆಫ್ಟಿನೆಂಟ್ ಜನರಲ್ ರಾಹುಲ್ ಆರ್ ಸಿಂಗ್ ತಿಳಿಸಿದ್ದಾರೆ.
ಭಾರತಕ್ಕೆ ತೊಂದರೆ ನೀಡುವ ಸಲುವಾಗಿ ಪಾಕಿಸ್ತಾನವನ್ನು ಬಳಸಿಕೊಂಡ ಚೀನಾ ನಾಲ್ಕು ದಿನಗಳ ಸೇನಾ ಸಂಘರ್ಷದ ಸಂದರ್ಭದಲ್ಲಿ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಿತ್ತು ಎಂದು ಅವರು ಹೇಳಿದ್ದಾರೆ.
FICCI ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೆಫ್ಟಿನೆಂಟ್ ಜನರಲ್ ರಾಹುಲ್ ಆರ್ ಸಿಂಗ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.