ವಿಡಿಯೋ
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಯ್ಯ ನಿಗಮ-ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ.
ದೆಹಲಿ ಭೇಟಿಯಲ್ಲಿಯೂ ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿಲ್ಲ, ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೆಹಲಿಯಿಂದ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಆ ವಿಚಾರ ನಾನೇನು ಮಾತಾಡುವುದಿಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement