ವಿಡಿಯೋ
ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದೋಚಿರುವ ಘಟನೆ ಶುಕ್ರವಾರ ನಡೆದಿದೆ.
ಮಧ್ಯಾಹ್ನ 12:30ರ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ನಾಲ್ವರು ದರೋಡೆಕೋರರು ನುಗ್ಗಿದ್ದಾರೆ.
ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರಿಗೆ ಗನ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಆತನ ಕೈ ಕಾಲು ಕಟ್ಟಿ ಬಾಯಿಗೆ ಸೆಲ್ಲೋ ಟೆಪ್ ಸುತ್ತಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ದರೋಡೆಕೋರರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement