ವಿಡಿಯೋ
ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 'ಶಕ್ತಿ' ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ್ದು, ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆ ಲತಾ ಅವರಿಗೆ ಸನ್ಮಾನಿಸಿದರು.
ಈ ವೇಳೆ ಬಸ್ ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಣೆ ಮಾಡಲಾಯಿತು.
ಇದೇ ವೇಳೆ ಶಕ್ತಿ ಯೋಜನೇಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement