ವಿಡಿಯೋ
ಗಲ್ವಾನ್ ಕಣಿವೆ ಸಂಘರ್ಷದ ನಂತರ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಚೀನಾಗೆ ಭೇಟಿ ನೀಡಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸಚಿವ ಎಸ್. ಜೈಶಂಕರ್ ಮಂಗಳವಾರ ಭೇಟಿಯಾದರು.
ಭೇಟಿಯ ಚಿತ್ರವನ್ನು ಹಂಚಿಕೊಂಡ ಜೈಶಂಕರ್, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿಯ ಬಗ್ಗೆ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದ್ದೇನೆ.
ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯಗಳನ್ನು ಅವರಿಗೆ ತಿಳಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ.
"ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ತಿಳಿಸಿದ್ದೇನೆ" ಎಂದು ಜೈಶಂಕರ್ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement