ವಿಡಿಯೋ
ಅಸ್ಸಾಂನ ಗೋಲ್ಪಾರ ಜಿಲ್ಲೆಯಲ್ಲಿ ಪೊಲೀಸ್-ಅರಣ್ಯ ಸಿಬ್ಬಂದಿ ಮತ್ತು ಸ್ಥಳಾಂತರಿಸಲ್ಪಟ್ಟ ವಸಾಹತುಗಾರರ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.
ಮೇಘಾಲಯ ಗಡಿಯ ಬಳಿಯ ಪೈಕಾನ್ ಮೀಸಲು ಅರಣ್ಯದಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಪೊಲೀಸ್ ಮತ್ತು ಅರಣ್ಯ ಇಲಾಖೆಯ ಜಂಟಿ ತಂಡವು ಆ ಪ್ರದೇಶದಲ್ಲಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.
ತಾತ್ಕಾಲಿಕ ಟೆಂಟ್ ಗಳಲ್ಲಿ ವಾಸಿಸುತ್ತಿದ್ದ ಕೆಲವು ಜನರು ಸಿಬ್ಬಂದಿಯ ಮೇಲೆ ದಾಳಿ ಮಾಡಿದರು.
ಇದರಿಂದಾಗಿ ನಾವು ಪ್ರತಿರೋಧ ತೋರಬೇಕಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement