ವಿಡಿಯೋ
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ AI171 ಅಪಘಾತದ ಕುರಿತಾದ ಪ್ರಶ್ನೆಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯ ಸಭೆಯಲ್ಲಿ ಸೋಮವಾರ ಉತ್ತರಿಸಿದರು.
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭಿಕ ದಿನದಂದು ಮಾತನಾಡಿದ ಅವರು, ತನಿಖೆಯ ಅಂತಿಮ ವರದಿಯು ಘಟನೆಯ ಸ್ಪಷ್ಟ ತಿಳುವಳಿಕೆಯನ್ನು ನೀಡುತ್ತದೆ.
ಭವಿಷ್ಯದಲ್ಲಿ ತಪ್ಪುಗಳನ್ನು ಸರಿಪಡಿಸುವ ಕ್ರಮಗಳಿಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದರು.
ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆಯನ್ನು ಪಾರದರ್ಶಕ, ನಿಯಮ ಆಧಾರಿತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ನಡೆಸುತ್ತಿದೆ ಎಂದು ಅವರು ಸದನಕ್ಕೆ ಭರವಸೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement