Watch | "ಈ ಸಲ ಕಪ್ ನಮ್ದು": 18 ವರ್ಷಗಳ ಆರ್‌ಸಿಬಿ ಕಾಯುವಿಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಟ್ರೋಫಿಯನ್ನು ಎತ್ತಿಹಿಡಿದಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು ಆರ್‌ಸಿಬಿ 6 ರನ್ ಗಳಿಂದ ಸೋಲಿಸಿತು.

ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ಆವೃತ್ತಿಗಳಲ್ಲಿ ಅವರ ಮೊದಲ ಗೆಲುವು.

ಆರ್‌ಸಿಬಿ ನೀಡಿದ 191 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಆರ್‌ಸಿಬಿ ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com