ವಿಡಿಯೋ
ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ.
ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಜಮಾಯಿಸಿದ್ದಾರೆ.
ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 10 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಈ ಪೈಕಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ ರವಾನಿಸಲಾಗಿದ್ದ ಆರು ಮಂದಿ ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement