ವಿಡಿಯೋ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಮುಂಬೈಗೆ ತೆರಳುತ್ತಿದ್ದ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement