ವಿಡಿಯೋ
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ AI 171 ವಿಮಾನ ಅಪಘಾತದ ಸ್ಥಳಕ್ಕೆ ಇಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅನಂತರ ನಂತರ ಇಲ್ಲಿನ ನಾಗರಿಕ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಮೋದಿ ಯೋಗಕ್ಷೇಮ ವಿಚಾರಿಸಿದರು.
ಮೇಘನಿನಗರ ಪ್ರದೇಶದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ (AI171) ಅಪ್ಪಳಿಸಿದ ಸ್ಥಳವನ್ನು ಪ್ರಧಾನಿ ಸುಮಾರು 20 ನಿಮಿಷಗಳ ಕಾಲ ಪರಿಶೀಲಿಸಿದರು.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ಜೊತೆಗಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement