ವಿಡಿಯೋ
ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದ ಆವರಣದಲ್ಲಿ ಭಾನುವಾರ ನಡೆದ ನಿಖಿಲ್ ಕುಮಾರಸ್ವಾಮಿ ನೇತೃತ್ವದ 'ಜನರೊಂದಿಗೆ ಜೆಡಿಎಸ್' ಪಕ್ಷ ಸಂಘಟನಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ HDK ಮಾತನಾಡಿದರು.
ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ.
ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.