ವಿಡಿಯೋ
ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿರುವ ಆಡಿಯೋ ಕ್ಲಿಪ್ ಜೂನ್ 20 ರಂದು ಎಲ್ಲೆಡೆ ವೈರಲ್ ಆಗತೊಡಗಿದೆ.
ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್, ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್‌ನಲ್ಲಿ ಕೇಳಿಬರುತ್ತಿದೆ.
ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ.
ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ. ಆಡಿಯೋ ಇಲ್ಲಿದೆ ಕೇಳಿ.
Advertisement