ವಿಡಿಯೋ
ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ಬೆನ್ನಲ್ಲೇ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ, ನಿಜಾನೆ ಇದೆ. ಅವರು ಹೇಳಿದ್ದಕ್ಕಿಂತ ಕೆಟ್ಟದಾಗಿದೆ ನನ್ನ ಪರಿಸ್ಥಿತಿ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಕಿಡಿಕಾರಿದ್ದಾರೆ.
ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂಬ ಶಾಸಕ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ಆಗಿ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಇರುಸುಮುರುಸಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.
Advertisement