ವಿಡಿಯೋ
ಗೃಹ ಸಚಿವ ಡಾ. ಜಿ ಪರಮೇಶ್ವರ, ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಮಾತುಗಳು ವ್ಯಾಪಕವಾಗಿ ವೈರಲ್ ಆಗಿದೆ.
ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ.
ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement