ವಿಡಿಯೋ
ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಇತ್ತೀಚೆಗೆ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರವಾಗಿ ಪರಿಗಣಿಸಿದ್ದಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷವಾದ ಸಂದರ್ಭದಲ್ಲಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಖರ್ಗೆ ಮಾತನಾಡಿದರು.
ಈ ವೇಳೆ 'ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು' ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ.
ತರೂರ್ ಅವರ ಲೇಖನ 'ದಿ ಹಿಂದೂ' ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಈ ಟೀಕೆ ಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement