ವಿಡಿಯೋ
ಚೀನಾದ ಕ್ವಿಂಗ್ಡಾವೊದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ರಕ್ಷಣಾ ಸಚಿವರ ಸಭೆಯಲ್ಲಿ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ನಿಲುವನ್ನು ದುರ್ಬಲಗೊಳಿಸುವ ದಾಖಲೆಗೆ ಸಹಿ ಹಾಕಲು ನಿರಾಕರಿಸಿದ್ದಾರೆ.
ಶೃಂಗಸಭೆಯ ಸಮಯದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಲ್ಲೇಖವನ್ನು ಕೈಬಿಡಲು ಚೀನಾ ಮತ್ತು ಪಾಕಿಸ್ತಾನ ಪ್ರಯತ್ನಿಸಿದ್ದವು.
ಅಲ್ಲದೆ, ಜಾಫರ್ ಎಕ್ಸ್‌ಪ್ರೆಸ್ ಅಪಹರಣ ಪ್ರಕರಣವನ್ನು ಸೇರಿಸಲು ಬಯಸಿದ್ದವು ಎಂದು ತಿಳಿದುಬಂದಿದೆ. ಹೀಗಾಗಿ ಈ ಬಗ್ಗೆ ಯಾವುದೇ ಒಮ್ಮತ ಮೂಡಲಿಲ್ಲ ಎಂದು ಮೂಲಗಳು ತಿಳಿಸಿವೆ.
26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಭಾರತದ ನಿಲುವನ್ನು ರಕ್ಷಣಾ ಸಚಿವರು ದೃಢವಾಗಿ ಇಂದಿನ ಸಭೆಯಲ್ಲಿ ದೃಢವಾಗಿ ಮಂಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement